ನಾಪೋಕ್ಲುವಿನಲ್ಲಿ ಆರ್‌ಎಸ್‌ಎಸ್‌ನಿಂದ ಪಥಸಂಚಲನ

21-npk-1
Published on

ನಾಪೋಕ್ಲು: ದೇಶದ ಗೌರವ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬದ್ಧವಾಗಿದೆ ಎಂದು ಸಂಘದ ಜಿಲ್ಲಾ ಪ್ರಮುಖ್ ಮುತ್ತಾರುಮುಡಿಯ ಶಾಮ್‌ಪ್ರಸಾದ್ ಹೇಳಿದರು.


ನಾಪೋಕ್ಲುವಿನಲ್ಲಿ ವಿಜಯದಶಮಿ ಪ್ರಯುಕ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಪಥಸಂಚಲನದಲ್ಲಿ ಭಾಗವಹಿಸಿ ಮಾತನಾಡಿದರು.


ಪ್ರತಿ ವರ್ಷ ವಿಜಯದಶಮಿ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಪಥಸಂಚಲನ ಆಯೋಜಿಸಲಾಗುತ್ತಿದೆ. ದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಧಾನಿಯನ್ನು ದೇಶಕ್ಕೆ ನೀಡಿದ್ದು ಸಂಘದ ಕೊಡುಗೆಯಾಗಿದೆ. ಅದಕ್ಕೆ ಪೂರಕವಾಗಿ ಸಾಮಾಜಿಕ ವ್ಯವಸ್ಥೆಯನ್ನು ರಾಜಕೀಯದಲ್ಲಿ ನಿರ್ಮಾಣ ಮಾಡುವಂತ ಕೆಲಸವನ್ನು ಸಂಘ ಮಾಡಿದೆ. ರಾಮಮಂದಿರ ನಿರ್ಮಾಣ, 370 ವಿಧಿಯ ರದ್ದತಿ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳಿಗೆ ಸಂಘ ಪ್ರೇರಣೆ ನೀಡಿದೆ ಎಂದರು.


ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ತಾಲೂಕು ಪ್ರಮುಖ್ ಜಾಲಿ ಪುವಪ್ಪ, ಪ್ರಮುಖ್ ಗೌತಮ್, ಎಂ. ಎಂ.ನರೇಂದ್ರ ಸೇರಿದಂತೆ 10 ಮಂಡಲಗಳ ನೂರಾರು ಸ್ವಯಂಸೇವಕರು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net