

ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್‌ನಲ್ಲಿ 2023 ಫೆ.11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಈ ರಿಯಾಯಿತಿಯು 2023 ಸೆಪ್ಟಂಬರ್ 9 ರ ತನಕ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.