

ಕಾರಟಗಿ: ಪಟ್ಟಣದ ರಸ್ತೆ ಬದಿ ಎಲ್ಲೆಂದರಲ್ಲಿ ಬೈಕ್‌ಗಳ ನಿಲುಗಡೆ ಹಾಗೂ ಫುಟ್‌ಪಾತ್ ಮೇಲೆ ಅಂಗಡಿ ಇಟ್ಟಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಪುರಸಭೆ, ಪೊಲೀಸ್ ಇಲಾಖೆ ಅಧಿಕಾರಿಗಳ ನಿರ್ಲಕ್ಷೃವೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇದನ್ನೂ ಓದಿ:ಶೀಘ್ರ ಬೆಳಗಾವಿಯಿಂದ ವಂದೆ ಭಾರತ ಸಂಚಾರ ಆರಂಭ
ಈ ಹಿಂದೆ ಕಾರಟಗಿ ಗ್ರಾಪಂ ಆಗಿತ್ತು. ನಂತರ ಜನಸಂಖ್ಯೆ ಹೆಚ್ಚಾಗಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಪಟ್ಟಣದಿಂದ ಹುಬ್ಬಳ್ಳಿ ಮತ್ತು ಹೈದರಾಬಾದ್‌ಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ತಾಲೂಕು ಕೇಂದ್ರ ಆಗಿರುವುದರಿಂದ ವಿವಿಧ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಆಗಮಿಸುತ್ತಾರೆ. ಆದರೆ, ರಸ್ತೆ ಬದಿ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಿವೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಟ್ರಾಫಿಕ್ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರೂ ಕ್ರಮಕ್ಕೆ ಮುಂದಾಗಿಲ್ಲ. ಇನ್ನೊಂದೆಡೆ ಬಿಡಾಡಿ ದನಗಳ ಕಿರಿಕಿರಿ ಹೆಚ್ಚಾಗಿದೆ. ವಾಹನಗಳಿಗೆ ಅಡ್ಡ ಬರುವುದರಿಂದ ವಾಹನ ಸವಾರರು ಹರಸಾಹಸ ಪಡಬೇಕಾಗಿದೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಪರಿಹರಿಸುವಂತೆ ಸಾರ್ವಜನಿಕರ ಆಗ್ರಹಿಸಿದ್ದಾರೆ.