

ಯಳಂದೂರು: ಪಟ್ಟಣದ ಪೊಲೀಸ್ ಠಾಣೆಯ ವತಿಯಿಂದ ಬುಧವಾರ ಪೊಲೀಸ್ ಇಲಾಖೆಯ ವತಿಯಿಂದ ಸಂಚಾರ ಸುರಕ್ಷತೆ ಜಾಗೃತಿ ಜಾಥಾ ನಡೆಸಲಾಯಿತು.
ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ಪಿಎಸ್‌ಐ ಮಹದೇವ ಅವರು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ವಾಹನ ಸಂಚಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಕುಡಿದು ವಾಹನ ಚಲಾಯಿಸಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆಯಲ್ಲಿ ಅಜಾಗರೂಕತೆ ಮಾಡಿದ್ದೇ ಆದಲ್ಲಿ ದಂಡದ ಜತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗಲಿದೆ. ಹಾಗಾಗಿ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಪಟ್ಟಣದ ಹಲವೆಡೆ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದ ತೊಂದರೆಯಾಗುತ್ತಿದೆ. ಹಾಗಾಗಿ ನಿಗದಿತ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬೇಕು. ಶಾಲಾ, ಕಾಲೇಜುಗಳ ರಸ್ತೆಗಳಲ್ಲಿ ನಿಧಾನವಾಗಿ ವಾಹನ ಚಲಿಸಬೇಕು, ಶಬ್ಧ ಹಾಗೂ ವಾಯು ಮಾಲಿನ್ಯ ಮಾಡುವ ವಾಹನಗಳನ್ನು ಬಳಸಬಾರದು, ವಿನಾಕಾರಣ ಹಾರ್ನ್ ಮಾಡುವುದು, ವಾಹನಗಳಲ್ಲಿ ಕರ್ಕಶ ಶಬ್ಧ ಬರುವಂತೆ ವಾಹನ ಮಾರ್ಪಾಡುಗೊಳಿಸಬಾರದು ಎಂದು ಸೂಚಿಸಿದರು.
ಎಸ್‌ಐ ಚಂದ್ರಶೇಖರ್, ಪ್ರತಾಪ್ ಸೇರಿದಂತೆ ಹಲವರು ಇದ್ದರು.