ಕೆಂಗೇರಿ-ಚಲ್ಲಘಟ್ಟ ಮಾರ್ಗದಲ್ಲಿ ಸುರಕ್ಷತಾ ತಪಾಸಣೆ; ಸೆ.29ಕ್ಕೆ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ವಿವರ…

Namma Metro
Published on

ಬೆಂಗಳೂರು: ಕೆಂಗೇರಿ-ಚಲ್ಲಘಟ್ಟ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರ ತಂಡ ಸೆ.29 ರಂದು ಅಂತಿಮ ಹಂತದ ಪರಿಶೀಲನೆ ನಡೆಸಲಿದ್ದಾರೆ. ಹೀಗಾಗಿ ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಶುಕ್ರವಾರ ಮೆಟ್ರೋ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ.

ಸುರಕ್ಷತಾ ಪರಿಶೀಲನೆ ಹೊರತಾಗಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಹಾಗೂ ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಿಲ್ದಾಣಗಳ ನಡುವೆ ಪೂರ್ಣ ದಿನ ನಮ್ಮ ಮೆಟ್ರೋ ಸಂಚಾರ ಇರಲಿದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್ ಸ್ಪಷ್ಟಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net