

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಕರೊನಾ ವೈರಸ್ ಬಗ್ಗೆ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ನಿಲ್ದಾಣದ ಪ್ರವೇಶ ದ್ವಾರದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಬ್ಯಾನರ್ ಲಗತ್ತಿಸಿ, ಅದರಲ್ಲಿ ವೈರಸ್ ನಿಯಂತ್ರಣಕ್ಕೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ವಿವರಿಸಿದ್ದಾರೆ.
ಎಲ್‌ಇಡಿ ಮತ್ತು ಆಡಿಯೋ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ. ಜನದಟ್ಟಣೆ ಹೆಚ್ಚಿರುವ ಟಿಕೆಟ್ ಬುಕ್ಕಿಂಗ್ ಕಚೇರಿ, ಟಿಕೆಟ್ ತಪಾಸಣಾ ಸ್ಥಳ ಮತ್ತಿತರ ಕಡೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನಿಲ್ದಾಣದ ಸಿಬ್ಬಂದಿಗೆ ಸೂಚಿಸಲಾಗಿದೆ.