

ಶಿವಮೊಗ್ಗ: ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಖುಷಿಯಿಂದ ಓದುವಂತಹ ವಾತಾವರಣ ಕಟ್ಟಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಹೊರವಲಯದ ಹರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಯಲ್ಲಿ ೧ರಿಂದ ೭ನೇ ತರಗತಿವರೆಗೆ ೧೩೦ ವಿದ್ಯಾರ್ಥಿಗಳು ದಾಖಲಾತಿ ಹೊಂದಿರುವುದು ಒಂದು ಸಾಧನೆ. ಶಾಲೆಯ ಅಭಿವೃದ್ಧಿಗೆ ದಾನಿಗಳ, ಹಳೆಯ ವಿದ್ಯಾರ್ಥಿಗಳ ಸಹಕಾರಕ್ಕೆ ಋಣಿಯಾಗಿರಬೇಕು ಎಂದರು.
ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕಲಿಕೆ ಹಾಗೂ ಮೂಲ ಸೌಕರ್ಯಗಳ ಕಡೆಗೂ ಹೆಚ್ಚಿನ ಗಮನ ನೀಡುತ್ತಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಡಿಸೆಂಬರ್‌ನಿAದ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರನ್ನು ನೀಡಲಾಗುತ್ತಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕ ವರ್ಗವಿದ್ದು ಅಂತಹ ಶಿಕ್ಷಕರು ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಶಾಲಾವಽ ಮೀರಿ ತರಗತಿ ಮತ್ತು ತರಬೇತಿ ನೀಡುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಹಕರಿಸಬೇಕು. ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಟ್ಯೂಷನ್ ಕಳುಹಿಸುವುದು ಮನೆಯಲ್ಲಿ ಪಾಲಕರು ಮಕ್ಕಳಿಗೆ ಪಾಠ ಹೇಳಿಕೊಡುವುದು ಕಷ್ಟ. ಆದ್ದರಿಂದ ಶಾಲೆಗಳಲ್ಲಿಯೇ ಶಾಲಾವಽ ಮುಗಿದ ನಂತರ ಪಾಠ ಹೇಳಿಕೊಡಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಅಗತ್ಯ ಮಾನದಂಡಗಳಿಗೆ ಒಳಪಡುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲು ಒತ್ತು ನೀಡಲಾಗುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನಮ್ಮ ಆದ್ಯತೆ. ಹರಿಗೆ ಶಾಲೆ ಅತ್ಯಂತ ಹಳೆಯದಾಗಿದ್ದು ಹೊಸ ಕಟ್ಟಡ ನಿರ್ಮಿಸಲು ೧.೫ ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಿದ್ದೀರಿ. ಡಿಡಿಪಿಐ, ಎಸ್‌ಡಿಎಂಸಿ ಜತೆ ಚರ್ಚಿಸಿ ಹೊಸ ಕಟ್ಟಡ, ಕೊಠಡಿಗಳ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಶಾಲಾ ಶಿಕ್ಷಕರು, ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಚಿವರೊಂದಿಗೆ ಹೊಸ ಕಟ್ಟಡ ಬೇಡಿಕೆಯ ನೀಲಿ ನಕಾಶೆಯನ್ನು ಬಿಡುಗಡೆಗೊಳಿಸಿದರು.
ಶಾಸಕಿ ಶಾರದಾ ಪರ‍್ಯಾನಾಯ್ಕ ಮಾತನಾಡಿದರು. ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ರೈತ ಮುಖಂಡ ಕೆ.ಟಿ.ಗಂಗಾಧರ್, ಪಾಲಿಕೆ ಮಾಜಿ ಸದಸ್ಯರಾದ ಸತ್ಯನಾರಾಯಣ್, ಆರ್.ಸಿ.ನಾಯ್ಕ, ವೈ.ಎಚ್.ನಾಗರಾಜ್, ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ರಾಮೇಗೌಡ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಬಿಇಒ ಪಿ.ನಾಗರಾಜ್ ಉಪಸ್ಥಿತರಿದ್ದರು.