ರೈಲಿಗೆ ಒಡೆಯರ್, ಕುವೆಂಪು ಹೆಸರು ನಾಮಕರಣ: ಕೇಂದ್ರ ಸರ್ಕಾರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಅಭಿನಂದನೆ

Bjp
Published on

ಮಂಡ್ಯ: ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ‘ಟಿಪ್ಪು ಎಕ್ಸ್‌ಪ್ರೆಸ್’ ರೈಲಿನ ಹೆಸರು ಬದಲಾಯಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರು ನಾಮಕರಣ ಮಾಡಲಾಗಿದೆ. ಇದರ ಜತೆಗೆ ಮೈಸೂರು-ತಾಳಗುಪ್ಪ ನಡುವೆ ಸಂಚರಿಸುತ್ತಿದ್ದ ತಾಳಗುಪ್ಪ ರೈಲಿಗೆ ‘ಕುವೆಂಪು ಎಕ್ಸ್‌ಪ್ರೆಸ್’ ಎಂದು ಹೆಸರಿಡಲಾಗಿದೆ. ಇದರೊಂದಿಗೆ ಜನರ ಬೇಡಿಕೆ ಸ್ಪಂದಿಸಿರುವ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರಿನ ರಾಜವಂಶಸ್ಥರು ನಾಡಿಗೆ ತಮ್ಮದೇ ಆದ ಅಪಾರ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ವಾಡಬೇಕು. ಅಂತೆಯೇ ಒಕ್ಕಲಿಗ ಸಮುದಾಯ ಕುವೆಂಪು ವಿಶ್ವವಾನವ ಸಂದೇಶವನ್ನು ಸಾರಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಕುವೆಂಪು ಹೆಸರಿಡಬೇಕೆಂಬುದು ಹಲವು ವಷರ್ದ ಮನವಿಯಾಗಿತ್ತು. ಅದರಂತೆ ಜನರ ಭಾವನೆಗೆ ಸ್ಪಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲಿಗೆ ಹೆಸರು ನಾಮಕರಣ ವಾಡಿಸುವ ವಿಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಅವರಿಗೆ ಅಭಿಂದನೆ ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net