ರೈಲು ಸಂಚಾರ ಭಾಗಶಃ ರದ್ದು

new train
Published on

ಹುಬ್ಬಳ್ಳಿ: ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್​ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಸೆ. 29 ರಿಂದ ಅ. 2 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ಎಸ್​ಎಸ್​ಎಸ್ ಹುಬ್ಬಳ್ಳಿ ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ. ವಿಜಯಪುರ- ಎಸ್​ಎಸ್​ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.

ಸೆ. 28 ರಿಂದ ಅ. 1ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು, ಮಂಗಳೂರು ಸೆಂಟ್ರಲ್​ವಿಜಯಪುರ ಎಕ್ಸ್​ಪ್ರೆಸ್ ವಿಶೇಷ ರೈಲು, ಬಾಗಲಕೋಟವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ.

ಸೆ. 29 ರಿಂದ ಅ. 2 ರವರೆಗೆ ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್​ಪ್ರೆಸ್ ವಿಶೇಷ ರೈಲು ವಿಜಯಪುರ ಬದಲು ಬಾಗಲಕೋಟ ನಿಲ್ದಾಣದಿಂದ ತನ್ನ ನಿಗದಿತ ವೇಳಾಪಟ್ಟಿ ಪ್ರಕಾರ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.

ಸೆ. 28 ರಿಂದ ಅ. 1 ರವರೆಗೆ ಮೈಸೂರಿನಿಂದ ಹೊರಡುವ ಮೈಸೂರು-ಬಾಗಲಕೋಟ ಬಸವ ಎಕ್ಸ್​ಪ್ರೆಸ್ ರೈಲು ವಿಜಯಪುರ ವರೆಗೆ ಮಾತ್ರ ಸಂಚರಿಸಲಿದೆ. ವಿಜಯಪುರ-ಬಾಗಲಕೋಟ ನಿಲ್ದಾಣಗಳ ನಡುವೆ ರೈಲು ಸಂಚಾರ ಭಾಗಶಃ ರದ್ದಾಗಿದೆ.

ಸೆ. 29 ರಿಂದ ಅ. 2 ರವರೆಗೆ ಬಾಗಲಕೋಟಮೈಸೂರು ಬಸವ ಎಕ್ಸ್​ಪ್ರೆಸ್ ರೈಲು ಬಾಗಲಕೋಟ ನಿಲ್ದಾಣದ ಬದಲು ವಿಜಯಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ಬಾಗಲಕೋಟ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ರೈಲು ಸಂಚಾರ ಭಾಗಶಃ ರದ್ದಾಗಿದೆ.

ಸೆ. 28 ರಿಂದ ಅ. 1 ರವರೆಗೆ ಯಶವಂತಪುರದಿಂದ ಹೊರಡುವ ಯಶವಂತಪುರ-ವಿಜಯಪುರ ಎಕ್ಸ್​ಪ್ರೆಸ್ ವಿಶೇಷ ರೈಲು ಗದಗ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಗದಗ-ವಿಜಯಪುರ ನಿಲ್ದಾಣಗಳ ನಡುವೆ ಈ ರೈಲಿನ ಸಂಚಾರ ಭಾಗಶಃ ರದ್ದುಗೊಳ್ಳಲಿದೆ.

ಸೆ. 29 ರಿಂದ ಅ. 2 ರವರೆಗೆ ವಿಜಯಪುರ ನಿಲ್ದಾಣದಿಂದ ಹೊರಡುವ ರೈಲು, ವಿಜಯಪುರ-ಯಶವಂತಪುರ ಎಕ್ಸ್​ಪ್ರೆಸ್ ವಿಶೇಷ ರೈಲು, ವಿಜಯಪುರದ ಬದಲು ಗದಗ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ವಿಜಯಪುರ-ಗದಗ ನಿಲ್ದಾಣಗಳ ನಡುವೆ ಈ ರೈಲಿನ ಸಂಚಾರ ಭಾಗಶಃ ರದ್ದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net