

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸಲು 2024-25ನೇ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಯೋಜನೆಯಡಿ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಕಲಾಶಿಬಿರ, ತರಬೇತಿ ಕಾರ್ಯಾಗಾರ ಅಥವಾ ಕಮ್ಮಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಕರ್ನಾಟಕದವರಾಗಿದ್ದು, 18 ವರ್ಷ ಮೇಲ್ಪಟ್ಟ ಆಸಕ್ತ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5-6 ಅಳತೆಯ ನಾಲ್ಕು ಚಿತ್ರಕಲಾಕೃತಿಗಳ ಛಾಯಾಚಿತ್ರಗಳೊಂದಿಗೆ ಆ.12ರೊಳಗೆ ಅಕಾಡೆಮಿಗೆ ಅರ್ಜಿ ಸಲ್ಲಿಸಬೇಕು. ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-02. ವಿವರಗಳಿಗೆ ಅಕಾಡೆಮಿಯ ಇಮೇಲ್:ಝ್ಝ.ಚ್ಟ್ಞಠಿಃಜಞಜ್ಝಿ.್ಚಟಞ ಹಾಗೂ ದೂರವಾಣಿ: 080-2248 0297 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.