

ಕುಶಾಲನಗರ:
ಮತಗಟ್ಟೆಯ ಅಧಿಕಾರಿಗಳಿಗೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕುಶಾಲನಗರದ ಎಪಿಎಂಎಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿತ್ತು. ತಾಲೂಕಿನ ಎಲ್ಲಾ ಮತಗಟ್ಟೆ ಬಿಎಲ್‌ಒಗಳಿಗೆ (ಬೂತ್ ಮಟ್ಟದ ಅಧಿಕಾರಿಗಳು) ಒಂದು ದಿನದ ತರಬೇತಿಯನ್ನು ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ನೀಡಲಾಯಿತು.
ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಂ.ಎನ್. ವೆಂಕಟನಾಯ್ಕ್ ಪಾಲ್ಗೊಂಡಿದ್ದರು. ಚುನಾವಣೆಯ ಮಹತ್ವ ಮತ್ತು ಚುನಾವಣೆ ಕೆಲಸ ಹೇಗೆ ಮಾಡಬೇಕು, ಮತದಾರರ ಪಟ್ಟಿಯನ್ನು ಹೇಗೆ ತಯಾರಿಸಬೇಕು ಮತ್ತು ಮತದಾರ ಪಟ್ಟಿಯನ್ನು ತೀವ್ರ ಪರಿಷ್ಕರಣೆ ಹೇಗೆ ಮಾಡಬೇಕು ಎಂಬುದರ ಬಗ್ಗೆ ಬಿ ಎಲ್ ಓ ಗಳಿಗೆ ಈ ವೇಳೆ ಮಾಹಿತಿ ನೀಡಲಾಯಿತು. ತರಬೇತುದಾರರಿಂದ ಗುಂಪು ಚಟುವಟಿಕೆಗಳ ಮೂಲಕ ಅರಿವು ಮೂಡಿಸುವುದು.
ಚರ್ಚೆ, ಬೀದಿ ನಾಟಕದ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸುವುದು ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದ ಚುನಾವಣಾ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಭಾಗವಹಿಸಿದರು.