ಸಮೀಕ್ಷೆ ಗಣತಿದಾರರಿಗೆ ತರಬೇತಿ

training
Published on

ಮಡಿಕೇರಿ:

ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬAಧ ಸಮೀಕ್ಷೆ ಗಣತಿದಾರರಿಗೆ(ಶಿಕ್ಷಕರಿಗೆ) ತರಬೇತಿ ಕಾರ್ಯಾಗಾರ ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು. ಮಡಿಕೇರಿ ತಾಲೂಕಿಗೆ ಸಂಬAಧಪಟ್ಟAತೆ ನಡೆದ ತರಬೇತಿಯಲ್ಲಿ 170 ಶಿಕ್ಷಕರು ಪಾಲ್ಗೊಂಡು ಮಾಹಿತಿ ಪಡೆದರು

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬAದ ನ್ಯಾಯಮೂರ್ತಿ ಡಾ. ಎಚ್.ಎನ್. ನಾಗಮೋಹನದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬAಧ ಸಮೀಕ್ಷೆಗೆ ನಿಯೋಜಿಸಿರುವ ಶಿಕ್ಷಕರು, ಗಣತಿದಾರರು ಪರಿಶಿಷ್ಟ ಜಾತಿ ಕುಟುಂಬಗಳು ಹೇಳುವ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಸಂಬAಧ ಸರ್ಕಾರದ ನಿರ್ದೇಶನ ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ರೀತಿಯ ಸಂಶಗಳಿಗೆ ಅವಕಾಶ ಮಾಡಬಾರದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಮಾಸ್ಟರ್ ಟ್ರೆöÊನರ್‌ಗಳಾದ ಪ್ರಶಾಂತ್ ಕುಮಾರ್, ಭಾರತಿ, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net