

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಅಂಗ ಸಂಸ್ಥೆ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹಾಗೂ ನಗರದ ಯಶೋಧಾ ವೆಲ್ಫೇರ್ ಟ್ರಸ್ಟ್ ಸಹಯೋಗದಲ್ಲಿ ಆ. 1ರಿಂದ ಯಶೋಧಾ ವೆಲ್ಫೇರ್ ಟ್ರಸ್ಟ್ನ ಕಟ್ಟಡದಲ್ಲಿ ಹೆಣ್ಣು ಮಕ್ಕಳಿಗೆ ಒಂದು ತಿಂಗಳ ಅವಧಿಯ ಆರಿ ವರ್ಕ್ ತರಬೇತಿ ಶಿಬಿರ ಏರ್ಪಡಿಸಿದೆ.
ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರದಲ್ಲಿ ಫ್ಯಾಶನ್ ಡಿಸೈನಿಂಗ್ ತರಬೇತಿ ಪಡೆದ 25 ಜನರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಡಾ. ಪಲ್ಲವಿ ದೇಶಪಾಂಡೆ ತರಬೇತಿಗೆ ಚಾಲನೆ ನೀಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ವರದಾ ಬ್ಯಾಹಟ್ಟಿ, ಪ್ರತಿಮಾ ಪ್ರವಿಣ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಯಶೋಧಾ ವೆಲ್ಫೇರ್ ಟ್ರಸ್ಟ್ನ ಟ್ರಸ್ಟಿ ಉಮಾ ಅಗ್ನಿಹೋತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ನವನಗರದ ದಿವ್ಯಾ ಬ್ಯಾಹಟ್ಟಿ ತರಬೇತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.