ನಾಯಕತ್ವ ಬೆಳೆಸಲು ತರಬೇತಿ ಶಿಬಿರ ಸಹಕಾರಿ

nss
Published on

ನರೇಗಲ್ಲ: ನಾಯಕತ್ವದ ಗುಣವನ್ನು ವಿದ್ಯಾರ್ಥಿ ದಿಸೆಯಿಂದಲೆ ಒದಗಿಸುವ ಮಹತ್ತರ ಉದ್ದೇಶದಿಂದಲೇ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ನಾಯಕತ್ವ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕವಿವಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ಎಂ.ಬಿ. ದಳಪತಿ ಹೇಳಿದರು.

ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕ.ವಿ.ವಿ. ರಾಷ್ಟ್ರೀಯ ಸೇವಾ ಯೋಜನಾ ಕೋಶ, ಸ್ನಾತಕೋತ್ತರ ಕೇಂದ್ರ ಮತ್ತು ಶ್ರೀ ಅನ್ನದಾನೇಶ್ವರ ಪದವಿ ಕಾಲೇಜುಗಳ ಆಶ್ರಯದಲ್ಲಿ ಏಳು ದಿನ ನಡೆಯುವ ನಾಯಕತ್ವ ತರಬೇತಿ ಶಿಬಿರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಎವಿವಿಪ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ನಿವೃತ್ತ ಪ್ರಾಚಾರ್ಯ ಬಿ. ಎಫ್. ಚೇಗರೆಡ್ಡಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ವೀರಾಪೂರ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ನೋಡಲ್ ಅಧಿಕಾರಿ ವಿ.ಎಚ್. ಕೊಳ್ಳಿ, ಸಂಸ್ಥೆಯ ಆಡಳಿತಾಧಿಕಾರಿ ಎನ್.ಆರ್. ಗೌಡರ ಉಪಸ್ಥಿತರಿದ್ದರು. ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ಸ್ವಾಗತಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರತ್ನಾ ಹಿರೇಮಠ ನಿರೂಪಿಸಿದರು. ಡಾ. ಕಲ್ಲಯ್ಯ ಹಿರೇಮಠ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net