ಶೌರ್ಯ ಘಟಕದ ಸ್ವಯಂಸೇವಕರಿಗೆ ತರಬೇತಿ

New Project (18)
Published on

ಸುಳ್ಯ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ತಾಲೂಕಿನ ಶೌರ್ಯ ಸ್ವಯಂಸೇವಕರಿಗೆ ತರಬೇತಿ ಕಾರ್ಯಾಗಾರ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಸುಳ್ಯ ತಾಪಂ ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಸ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಎಸ್. ಶುಭಹಾರೈಸಿದರು.

ಎನ್‌ಡಿಆರ್‌ಎಫ್ ಟೀಂ ಕವಾಂಡರ್ ಇನ್‌ಸ್ಪೆಕ್ಟರ್ ಶಾಂತಿಲಾಲ್ ಜಟಿಯಾ ನೇತೃತ್ವದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಟಕದ ಸ್ವಯಂಸೇವಕರಿಗೆ ತರಬೇತಿ ನೀಡಲಾಯಿತು. ಯೋಜನೆಯ ಕೇಂದ್ರ ಒಕ್ಕೂಟ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಶೌರ್ಯ ಯೋಜನೆಯ ಯೋಜನಾಧಿಕಾರಿ ಜೈವಂತ್ ಪಟಗಾರ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಪಿ.ಜಿ.ಜಯರಾಮ, ಕ್ಯಾಪ್ಟನ್ ಸತೀಶ್ ಮೊದಲಾದವರಿದ್ದರು. ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿದರು. ಮೇಲ್ವಿಚಾರಕಿ ಸವಿತಾ ನಿರೂಪಿಸಿದರು. ದಿನೇಶ್ ವಂದಿಸಿದರು.

ಸಾಕ್ಷ್ಯಚಿತ್ರ ಪ್ರದರ್ಶನ

ತರಬೇತಿ ಕಾರ್ಯಾಗಾರದಲ್ಲಿ ಸುಳ್ಯ ತಾಲೂಕಿನ ಶೌರ್ಯ ಟಕಗಳ ಸಂಯೋಜಕರು, ಟಕ ಪ್ರತಿನಿಧಿಗಳು, ಸ್ವಯಂಸೇವಕರು ಭಾಗವಹಿಸಿದ್ದರು. ಶೌರ್ಯ ವಿಪತ್ತು ನಿರ್ವಹಣಾ ಟಕ 5 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ತರಬೇತಿ ನೀಡಿದ ಅಧಿಕಾರಿಗಳಾದ ಟೀಮ್ ಕವಾಂಡರ್ ಶಾಂತಿಲಾಲ್ ಜಟಿಯ, ಜೈವಂತ್ ಪಟಗಾರ ಹಾಗೂ ಇಒ ಅಧಿಕಾರಿ ರಾಜಣ್ಣರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net