ಅಪ್‌ಡೇಟ್ ಆಗಲು ತರಬೇತಿ ಸೂಕ್ತ: ರಾಮಚಂದ್ರ ಶೆಟ್ಟಿ ಅನಿಸಿಕೆ

Mbd_Training
Published on

ಮೂಡುಬಿದಿರೆ: ಈ ಪೀಳಿಗೆಯಲ್ಲಿ ಶಿಕ್ಷಕರು ಸಹ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕಾದ ಅವಶ್ಯಕತೆಯಿದೆ. ಇಲ್ಲದಿದ್ದರೆ ಅವರು ಪ್ರಸ್ತುತ ತಂತ್ರಜ್ಞಾನದಿಂದ ಮತ್ತು ಪ್ರಸ್ತುತ ಕಲಿಕಾ ಮಾಧ್ಯಮದಿಂದ ಹಿಂದುಳಿಯುತ್ತಾರೆ. ಅಪ್‌ಡೇಟ್ ಆಗಲು ಸೂಕ್ತ ತರಬೇತಿ ಅಗತ್ಯ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ರಾಮಚಂದ್ರ ಶೆಟ್ಟಿ ಹೇಳಿದರು.

ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಆರು ದಿನಗಳ ರಾಷ್ಟ್ರಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಪ್ರಕೃತಿ ಚಿಕಿತ್ಸೆ ಸಂಸ್ಥೆಯ ನಿರ್ದೇಶಕಿ ಪ್ರೊ.ಕೆ.ಸತ್ಯಲಕ್ಷ್ಮೀ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್, ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ಡಾ.ರೋಶನ್ ಪಿಂಟೋ, ಯೋಗ ವಿಭಾಗದ ಮುಖ್ಯಸ್ಥೆ ಡಾ.ಅರ್ಚನಾ ಉಪಸ್ಥಿತರಿದ್ದರು.

ಆಳ್ವಾಸ್ ಪ್ರಕೃತಿ ಚಿಕಿತ್ಸೆ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ ಸ್ವಾಗತಿಸಿದರು. ಅಜು ಪೌಲ್ ನಿರೂಪಿಸಿದರು. ಪ್ರಾಧ್ಯಾಪಕಿ ಅಕ್ಷತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net