ಮಲೆನಾಡಲ್ಲಿ ತರಬೇತಿ ಅಗತ್ಯ

sri sport
ರಾಜ್ಯ ಮಟ್ಟದ ಕ್ರೀಡಾಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶೃಂಗೇರಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಅಭಿನಂದಿಸಲಾಯಿತು. ಶ್ರೀಮಂದಾರ, ಮಹೇಶ್, ಆದರ್ಶ ಇತರರಿದ್ದರು.
Published on

ಶೃಂಗೇರಿ: ಮಲೆನಾಡಿನ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ದೊರಕಿದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಲಿದ್ದಾರೆ ಎಂದು ಸರ್ಕಾರಿ ಪದವಿ ಕಾಲೇಜಿನ ಅಭಿವದ್ಧಿ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದಿಸಿ ಮಾತನಾಡಿದರು. ಕ್ರೀಡೆಯಲ್ಲಿ ಸಾಧನೆ ಮಾಡುವವರಿಗೆ ನಿರಂತರ ಪ್ರಯತ್ನ ಅಗತ್ಯ. ಶೈಕ್ಷಣಿಕವಾಗಿಯೂ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಬೇಕಿದೆ ಎಂದರು.
ಪ್ರಾಚಾರ್ಯ ಅರುಣಕುಮಾರ್ ಮಾತನಾಡಿ, ಕಾಲೇಜಿನಲ್ಲಿ ಕ್ರೀಡಾಪಟುಗಳಿಗೆ ಲಭ್ಯವಿರುವ ತರಬೇತುದಾರರಿಂದ ತರಬೇತಿ ನೀಡಲಾಗಿದೆ. ಕ್ರೀಡಾಪಟುಗಳ ಪಾಲಕರು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಸಮಿತಿಯ ಕೆ.ಎಲ್.ಗೋಪಾಲಕಷ್ಣ, ಉಪನ್ಯಾಸಕರಾದ ಶ್ರೀಮಂದಾರ, ಮಹೇಶ್ ಕಾಕತ್ಕರ್, ಆದರ್ಶ, ಸಂಪದ, ಸ್ಮಿತಾ, ಅಮಿತಾ ಮತ್ತು ರೇಷ್ಮಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net