

ಹುಬ್ಬಳ್ಳಿ: ಇಲ್ಲಿಯ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಡಾ.ಎಚ್.ಕೆ. ಶಿವಕುಮಾರ ಗುರುವಾರ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ರೈತರು ಮತ್ತು ಕೃಷಿ-ವ್ಯಾಪಾರ ಉದ್ಯಮಿಗಳನ್ನು ಜಾಗತಿಕ ಮಾರುಕಟ್ಟೆಗೆ ತೊಡಗಿಸಿಕೊಳ್ಳಲು ಅಗತ್ಯ ಜ್ಞಾನ ಮತ್ತು ಕೌಶಲಗಳೊಂದಿಗೆ ಸಜ್ಜುಗೊಳಿಸಬೇಕಿದೆ. ರಫ್ತು ನಿಯಮ, ಪ್ರಸ್ತುತ ಮಾರುಕಟ್ಟೆ ಪ್ರವೃತ್ತಿ, ಪ್ಯಾಕೇಜಿಂಗ್ ಮತ್ತು ಲೇಬಲಿಂಗ್ ಅಗತ್ಯತೆ, ಲಾಜಿಸ್ಟಿಕ್ಸ್ ನಿರ್ವಹಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ರಮಗಳ ಸಂಪೂರ್ಣ ತಿಳಿವಳಿಕೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ 2025ರ ಫೆಬ್ರುವರಿಯಲ್ಲಿ ಒಂದು ದಿನದ ವಿಚಾರ ಸಂಕಿರಣ ಹುಬ್ಬಳ್ಳಿಯಲ್ಲಿ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಇದೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿಯನ್ನು ಡಾ. ಶಿವಕುಮಾರ ಅವರಿಗೆ ಸಲ್ಲಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, ಉಪಾಧ್ಯಕ್ಷ ಪ್ರವೀಣ ಅಗಡಿ, ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ, ಕೃಷಿ ತೋಟಗಾರಿಕೆ ಸಮಿತಿ ಚೇರ್ಮನ್ ಸಿ.ಎನ್. ಕರಿಕಟ್ಟಿ, ದಯಾನಂದ ಮಗಜಿಕೊಂಡಿ, ಸುಭಾಷ ಹೊಸಮನಿ, ವಿದ್ಯಾಧರ ಯಲಗಚ್ಚ, ಸಂತೋಷ ಪಾಟೀಲ, ಸದಾನಂದ ಇತರರು ಉಪಸ್ಥಿತರಿದ್ದರು.