ಬದ್ಧತೆಯಿಂದ ಕೆಲಸ ನಿರ್ವಹಿಸಿದಾಗ ಪ್ರತಿಫಲ : ಪ್ರಕೃತಿ ಚಿಕಿತ್ಸಾ ಕೇಂದ್ರ ಸಿಇಒ ಶ್ರದ್ಧಾ ಅಮಿತ್ ಅನಿಸಿಕೆ

New Project (13)
Published on

ಬೆಳ್ತಂಗಡಿ: ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳಿಗೆ ಧ್ವನಿ ಕೊಟ್ಟ ವೇದಿಕೆ ಎಂದರೆ ಜ್ಞಾನವಿಕಾಸ ಕಾರ್ಯಕ್ರಮ ಮಹಿಳಾ ಸಬಲೀಕರಣಕ್ಕೆ ಪ್ರೇರಣೆ ನೀಡುವ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಜ್ಞಾನವಿಕಾಸ ಸಮನ್ವಯಾಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಿದಾಗ ಮಾತ್ರ ಪ್ರತಿಫಲ ಸಿಗಲು ಸಾಧ್ಯ ಎಂದು ಬೆಂಗಳೂರು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಹೇಳಿದರು.

ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಉದ್ಘಾಟಿಸಿ ಮಾತನಾಡಿದರು.

ವೃತ್ತಿಗಾಗಿ ಮಾತ್ರ ಕೆಲಸ ನಿರ್ವಹಿಸದೆ, ವೃತ್ತಿಯನ್ನು ಪ್ರವೃತ್ತಿಯನ್ನಾಗಿ ಬದಲಾಯಿಸಿದಾಗ ಮಾತ್ರ ತೃಪ್ತಿ ಕಾಣಲು ಸಾಧ್ಯ. ಮಹಿಳೆಯರ ಜತೆ ಕೆಲಸ ಮಾಡುವಾಗ ಸಮನ್ವಯಾಧಿಕಾರಿಗಳು ಎಲ್ಲಾ ವಿಚಾರಗಳ ಕುರಿತು ಜ್ಞಾನವಿದ್ದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ನೀಡಲು ಸಾಧ್ಯ. ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಯಂದಿರು ಭಾಗವಹಿಸುವ ಕಾರಣ ಗುರುಗಳಿಗೆ ಗುರುಗಳಾಗಿ ಸಮನ್ವಯಾಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net