ಕುರಿ ಮೇಕೆ ಸಾಕಾಣಿಕೆ ತರಬೇತಿ

Goat
Published on

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯು ಡಿ. 26ರಿಂದ ಕುರಿ/ಮೇಕೆ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿ ಹಮ್ಮಿಕೊಂಡಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಡಿ. 23ರೊಳಗೆ ಅರ್ಜಿ ಸಲ್ಲಿಸಬೇಕು.

ವಿಳಾಸ: ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ: 9380162042, 9241482541, 9740982585 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net