ತುರ್ತು ಪರಿಸ್ಥಿತಿ ನಿಭಾಯಿಸಲು ತರಬೇತಿ

bnk ndrf
ಎನ್‌ಡಿಆರ್‌ಎಫ್‌ನಿಂದ ಸಬ್ಲಿ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಪರಿಸ್ಥಿತಿ ನಿಭಾಯಿಸುವ ತರಬೇತಿ ನೀಡಲಾಯಿತು.
Published on

ಣಕಲ್: ಮಲೆನಾಡಿನಲ್ಲಿ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ವಿಪತ್ತು ಪ್ರಾಧಿಕಾರ (ಎನ್‌ಡಿಆರ್‌ಎಫ್), ಧರ್ಮಸ್ಥಳ ಗ್ರಾಮಾಭಿವೃದ್ಧಿ ವಿಪತ್ತು ನಿರ್ವಹಣ ಘಟಕದಿಂದ ಸಬ್ಲಿ ಗ್ರಾಮದ ಮಾಜಿ ಯೋಧ ಲಕ್ಷ್ಮಣ್ ಮನೆಯ ಹತ್ತಿರ ಗುಡ್ಡ ಕುಸಿತದ ಕಲ್ಪಿತ ಪ್ರದರ್ಶನ ನಡೆಸಲಾಯಿತು. ತುರ್ತು ಪರಿಸ್ಥಿತಿ ನಿಭಾಯಿಸಲು ಯುವಕರಿಗೆ ತರಬೇತಿ ನೀಡಲಾಯಿತು.

ಮೂಡಿಗೆರೆ ತಹಸೀಲ್ದಾರ್ ಶೈಲೇಶ್ ಎಸ್.ಪರಮಾನಂದ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಿವಾನಂದ, ಚಿತ್ರದುರ್ಗ ಪ್ರಾದೇಶಿಕ ಜನ ಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್, ಬೆಳ್ತಂಗಡಿ ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಕಿಶೋರ್, ಬಣಕಲ್ ವಲಯ ಮೇಲ್ವಿಚಾರಕ ಸಂದೀಪ್, ಎಸ್‌ಐ ಕೌಶಿಕ್, ಶೌರ್ಯ ವಿಪತ್ತು ನಿರ್ವಹಣ ಘಟಕದ ಮಾಸ್ಟರ್ ಪ್ರವೀಣ್ ಪೂಜಾರಿ, ಕ್ಯಾಪ್ಟನ್ ಕೆ.ಎಲ್.ರವಿ, ಅಗ್ನಿಶಾಮಕ ದಳದ ಅಧಿಕಾರಿಗಳು, ಶಿಕ್ಷಕರು ಮತ್ತು ಶಾಲಾ ಮಕ್ಕಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net