ತರಬೇತಿ ಕಾರ್ಯಾಗಾರ

workshop 1
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಸಹಯೋಗದೊಂದಿಗೆ ಬುಧವಾರ ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ’ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ ಅನುಷ್ಠಾನ ಕುರಿತು ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೋಲಾ ಪಂಡಿತ್ ಕಾರ್ಯಕ್ರಮ ಉದ್ಘಾಟಿಸಿದರು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಸ್ವರೂಪ ಕಾಯ್ದೆ ಅನುಷ್ಠಾನಕ್ಕಾಗಿ ಸರ್ಕಾರಿದಿಂದ ಕೈಗೊಂಡಿರುವ ಕಾರ್ಯಕ್ರಮಗಳು, ಲಿಂಗ ತಾರತಮ್ಯ ಹಾಗೂ ಮಹಿಳೆಯರ ಮೇಲೆ ಅದರ ಪರಿಣಾಮಗಳು ಹಾಗೂ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರಿಗೆ ಸಮಲೋಚನೆ ಕುರಿತು ಮಾಹಿತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net