

ಉಡುಪಿ: ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕರಾಗಿರಬೇಕು. ಪ್ರಾಮಾಣಿಕತೆ ಕಡಿಮೆಯಾದರೇ ಅಪ್ರಮಾಣಿಕ ಎನ್ನಿಸಿಕೊಳ್ಳುತ್ತಾರೆ. ಸಂಪೂರ್ಣ ಹದಗೆಟ್ಟರೇ ಭ್ರಷ್ಟಾಚಾರಿಗಳಾಗುತ್ತಾರೆ. ತನಿಖಾಧಿಕಾರಿಗಳು ಸೂಕ್ಷ$್ಮಗ್ರಾಹಿಗಳಾಗಿರಬೇಕು. ಇದರಿಂದ ಮಾತ್ರ ಆಪಾದನೆ ಸಾಬೀತುಪಡಿಸಲು ಸಾಧ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್.ಗಂಗಣ್ಣನವರ್ ಹೇಳಿದರು.
ಬುಧವಾರ ಬನ್ನಂಜೆಯ ಎಸ್ಪಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ, ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ತಂದೆ, ತಾಯಿಗಳ ಮಧ್ಯೆ ವಿರಸ ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಉಂಟಾಗುತ್ತದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮಕ್ಕಳ ವಿರುದ್ಧ ನಡೆಯುವ ಅಪರಾಧಗಳಲ್ಲಿ ಪೋಲಿಸರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಆದರೆ ನ್ಯಾಯಾಲಯ ಸೂಕ್ತ ಸಾಕ್ಷ್ಯಗಳನ್ನು ಕೇಳುತ್ತವೆ. ಈ ಸಂದರ್ಭದಲ್ಲಿ ಮನಸ್ಸು ಮತ್ತು ವಿವೇಕ ಅಳವಡಿಸಿಕೊಂಡು ಅಂತರಾತ್ಮದಿಂದ ಅವಲೋಕಿಸಿದಾಗ ಸಾಕ್ಷ ಸಿಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆ ಅನುಷ್ಠಾನ ಬಹಳಷ್ಟು ಸೂಕ್ಷ$್ಮವಾಗಿರುತ್ತದೆ. ಬಾಲಾಪರಾಧ ಕಾಯ್ದೆ ಉದ್ದೇಶ ಮಕ್ಕಳನ್ನು ಅಪರಾಧಿ ಭಾವನೆಯಿಂದ ನೋಡದೆ ಅವರ ವ್ಯಕ್ತಿತ್ವ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಮಕ್ಕಳು ಅಪರಾಧ ಮಾಡಲು ಕಾರಣಕರ್ತರನ್ನು ಗುರುತಿಸಬೇಕು. ಈ ತಪು$್ಪಗಳು ಪುನರಾವರ್ತನೆಯಾಗದೆ ಉತ್ತಮ ಜೀವನ ರೂಪಿಸಲು ಸಹಕರಿಸಬೇಕು ಎಂದರು.
ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ, ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಮನುಪಟೇಲ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನಾ ನಾಯಕ್, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪಿ.ಎ ಹೆಗಡೆ, ಹಿರಿಯ ಮಕ್ಕಳ ಪೋಲಿಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ. ಉಪಸ್ಥಿತರಿದ್ದರು. ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್ ಸಂಪನ್ಮೂಲವ್ಯಕ್ತಿಗಳಾಗಿದ್ದರು.