28ರಂದು ರೈತರಿಗೆ ತರಬೇತಿ ಕಾರ್ಯಾಗಾರ

Published on

ಗುಂಡ್ಲುಪೇಟೆ: ಕೃಷಿ ಇಲಾಖೆಯು ಫೆ. 28ರಂದು ತಾಲೂಕಿನ ಹಂಗಳ ಗ್ರಾಮದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಬೆಳಗ್ಗೆ 10.30 ಕ್ಕೆ ಕೃಷಿ ಇಲಾಖೆ ವತಿಯಿಂದ ರೈತರಿಗೆ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಿದೆ.

ತರಬೇತಿಯಲ್ಲಿ ತರಬೇತಿ ಅಟಲ್ ಭೂಜಲ್ ಯೋಜನೆಯಡಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲಭದ್ರತಾ ಯೋಜನೆ ಸಿದ್ಧಪಡಿಸುವುದು, ನೀರಿನ ಬಳಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನಿರೀನ ಮರು ಪೂರೈಕೆ ಕ್ರಮಗಳ ಬಗ್ಗೆ ಚರ್ಚಿಸಿ ಮಾಹಿತಿ ನೀಡಲಾಗುವುದು. ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಲು ಮೊ: 8496904925, 8277935594 ಸಂಖ್ಯೆಗಳಿಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net