ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವ ಅನುಮಾನ

1LNG01
Published on

ಲಿಂಗಸುಗೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಎಸಿ ಕಚೇರಿ ಎಫ್‌ಡಿಸಿ ಅಮರೇಶಗೆ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಮನವಿ ಸಲ್ಲಿಸಿದರು.

ರಾಜ್ಯಸಭೆ ಚುನಾವಣೆ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಖಂಡನೀಯ. ಘೋಷಣೆ ಕೂಗುವಾಗ ನಾಸೀರ್ ಹುಸೇನ್ ಮತ್ತು ಅವರ ಪಕ್ಕದಲ್ಲಿರುವವರು ಘೋಷಣೆ ಹಾಕುವವರನ್ನು ತಡೆಯಲು ಯತ್ನಿಸಲಿಲ್ಲ. ಬಳಿಕ ಮಾಧ್ಯಮದವರ ಮೇಲೆ ದರ್ಪ ತೋರುವ ಮೂಲಕ ನಾಸೀರ್ ಹುಸೇನ್ ದೇಶದ್ರೋಹಿಗಳಿಗೆ ಬೆಂಬಲ ನೀಡಲು ಹೊರಟಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿ ಪಾಕಿಸ್ತಾನ ಧ್ವಜ ಹಾರಿಸಲಾಗಿತ್ತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಪ್ರಕರಣದ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವ ತನಕ ರಾಜ್ಯಸಭೆಯ ಸದಸ್ಯರಾಗಿ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net