ಪಥಸಂಚಲನ ನಡೆಸಿದ ಪೌರಕಾರ್ಮಿಕರು

hnl
Published on

ಹೊನ್ನಾಳಿ: ದೇಶದ ಇತಿಹಾಸದಲ್ಲಿ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ 78ನೇ ಸ್ವಾತಂತ್ರ್ಯೋತ್ಸವದಂದು ಪೌರಕಾರ್ಮಿಕರು ಪಥ ಸಂಚಲನದಲ್ಲಿ ಪಾಲ್ಗೊಂಡು ಗಣ್ಯಮಾನ್ಯರಿಗೆ ಗೌರವ ವಂದನೆ ಸಲ್ಲಿಸಿದರು.

ನಿತ್ಯವೂ ಮುಂಜಾನೆ ಪಟ್ಟಣದ ಕಸ, ತ್ಯಾಜ್ಯ ಸ್ವಚ್ಛಗೊಳಿಸಿ, ಸುಂದರಗೊಳಿಸುವ ಕಾಯಕ ನಿರತರಾಗಿರುತ್ತಿದ್ದರು. ಆದರೆ, ಗುರುವಾರ ಮಾತ್ರ ಎಂದಿನಂತೆ ಇರಲಿಲ್ಲ. ಪುರಸಭೆಯ ನೂತನ ಮುಖ್ಯಾಧಿಕಾರಿ ಲೀಲಾವತಿ ಅವರು ಪೌರಕಾರ್ಮಿಕರಿಗೂ ಸಮವಸ್ತ್ರ ಕೊಡಿಸಿ ಸ್ವಾತಂತ್ರೃ ದಿನಾಚರಣೆಯಲ್ಲಿ ಪಾಲ್ಗೊಂಡು ನಕ್ಕು ನಲಿಯುವಂತೆ ಮಾಡಿದರು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಾಸಕ ಡಿ.ಜಿ. ಶಾಂತನಗೌಡ ಪೌರಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ಮತ್ತಿತರ ವಸತಿ ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಅಥವಾ ಸಂದರ್ಶನ ರಹಿತವಾಗಿ ಅವಕಾಶ ನೀಡುವಂತೆ ಸರ್ಕಾರ ಆದೇಶ ಮಾಡಿದೆ. ನಿಮ್ಮ ಮಕ್ಕಳನ್ನು ವಸತಿ ಶಾಲೆಗಳಲ್ಲಿ ಓದಿಸಿ ಉನ್ನತ ವ್ಯಾಸಂಗ ನೀಡಿ ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net