ಡಾ.ಚಂದ್ರಗುಪ್ತ ವರ್ಗಾವಣೆ

Chandra guptha
Published on

ಮೈಸೂರು: ಎರಡು ವರ್ಷಕ್ಕೂ ಹೆಚ್ಚು ಕಾಲ ನಗರ ಪೊಲೀಸ್ ಆಯುಕ್ತರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದ ಡಾ.ಚಂದ್ರಗುಪ್ತ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಚಂದ್ರಗುಪ್ತ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ನಗರ ಪೊಲೀಸ್ ಆಯುಕ್ತರನ್ನಾಗಿ ಬಿ.ರಮೇಶ್ ಅವರನ್ನು ನಿಯೋಜಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. 2009ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಬಿ. ರಮೇಶ್, ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಎಸ್‌ಪಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net