

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದೆ. ವರ್ಗಾವಣೆ ಆದೇಶದಲ್ಲಿದ್ದ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ಧಾರವಾಡ ಮಾನಸಿಕ ಮತ್ತು ನರವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಽಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧಿನಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.