ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮದ ಅರಳಿಮರ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಕ್ರ ಹರಿದ ಪರಿಣಾಮ ಪ್ರಯಾಣಿಕ ಮೃತಪಟ್ಟಿದ್ದಾನೆ.
ಪಾಲಹಳ್ಳಿ ನಿವಾಸಿ ಪುಟ್ಟಸ್ವಾಮಿ (70) ಮೃತಪಟ್ಟವರು. ಭಾನುವಾರ ರಾತ್ರಿ 10.30 ರ ಸುಮಾರಿನಲ್ಲಿ ಮೈಸೂರು ನಗರದಿಂದ ಪಾಲಹಳ್ಳಿಗೆ ಸಾರಿಗೆ ಬಸ್‌ನಲ್ಲಿ ಪುಟ್ಟಸ್ವಾಮಿ ಹೊರಟಿದ್ದರು. ಗ್ರಾಮ ಬಂದಾಗ ಇವರು ಇಳಿಯುವುದನ್ನು ಗಮನಿಸದೆ ಚಾಲಕ ಮುಂದೆ ಹೋಗಿದ್ದರಿಂದ ಬಸ್‌ನ ಹಿಂಬದಿ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ ಶವವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ನಗರ ಸಾರಿಗೆ ಬಸ್‌ಅನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.