ಸಾರಿಗೆ ನೌಕರರಿಗೆ ಶೀಘ್ರ ಬಾಕಿ ವೇತನ ಪಾವತಿ : ಬಳ್ಳಾರಿಯಲ್ಲಿ ಸಚಿವ ಬಿ.ಶ್ರೀರಾಮುಲು ಹೇಳಿಕೆ

sriramulu
Published on

ಬಳ್ಳಾರಿ: ಬಾಕಿಯಿರುವ ಸಾರಿಗೆ ನೌಕರರ ಎರಡು ತಿಂಗಳ ವೇತನ ಕೊಡಲು ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸಾರಿಗೆ ನೌಕರರಿಗೆ ಇನ್ಮುಂದೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ನಷ್ಟದಲ್ಲಿರುವ ನಿಗಮಗಳನ್ನು ಲಾಭದತ್ತ ಕೊಂಡೊಯ್ಯಯಬೇಕಿದೆ. ಕರೊನಾ ಕಾರಣ ಐಷಾರಾಮಿ ಬಸ್‌ಗಳನ್ನು ಬೇರೆ ರಾಜ್ಯಗಳಿಗೆ ಸಮರ್ಪಕವಾಗಿ ಕಳುಹಿಸುತ್ತಿಲ್ಲ. ಡೀಸೆಲ್ ದರ ಹೆಚ್ಚಳವಾಗಿದ್ದು, ಬಸ್‌ಗಳು ಖಾಲಿ ಹೋದರೆ ನಷ್ಟವಾಗಲಿದೆ. ಹೀಗಾಗೇ ಎಲೆಕ್ಟ್ರಾನಿಕ್ ಬಸ್‌ಗಳನ್ನು ತರುತ್ತಿದ್ದೇವೆ ಎಂದು ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಸರ್ಕಾರ ಬೀಳಿಸುವ ವಿಚಾರದಲ್ಲಿ ಮಾತ್ರ ಅವರೆಲ್ಲ ಒಂದಾಗುತ್ತಿದ್ದಾರೆ. ಹೀಗಾಗಿಯೇ ಸೋನಿಯಾಗಾಂಧಿ ಮುಂದೆ ನಿಂತು ಹಸ್ತಲಾಘವ ಮಾಡಿ ಡಿಕೆಶಿ, ಸಿದ್ದರಾಮಯ್ಯ ೆಟೋ ತೆಗೆಸಿಕೊಳ್ಳುತ್ತಿದ್ದಾರೆ. ಅವರಲ್ಲಿ ಒಗ್ಗಟ್ಟಿಲ್ಲ. ಈಗಾಗಲೇ ಕಾಂಗ್ರೆಸ್ ಒಡೆದ ಮನೆಯಾಗಿದೆ. ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆನಂದಸಿಂಗ್ ನನ್ನ ಸ್ನೇಹಿತ. ಅವರು ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುವುದಿಲ್ಲ. ಈಗಾಗಲೇ ಸಿಎಂ ಜತೆ ಸಿಂಗ್ ಮಾತನಾಡಿದ್ದು ಸಮಸ್ಯೆ ಬಗೆಹರಿಯಲಿದೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದಿರೋದು ಖುಷಿಯಾಗಿದೆ. ಸಮಯ ಸಿಕ್ಕ ಕೂಡಲೇ ಅವರನ್ನು ಭೇಟಿ ಮಾಡುವೆ. ಈ ಹಿಂದೆ ಬೆಂಗಳೂರಿನಲ್ಲಿ ಹಲವಾರು ಬಾರಿ ಭೇಟಿಯಾಗಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net