2 ಸಾವಿರ ಚಾಲಕ ಕಂ ನಿರ್ವಾಹಕರ ನೇಮಕ; 8 ವರ್ಷದ ನಂತರ ಆದೇಶ ವಿತರಿಸಿದ ಸಾರಿಗೆ ಸಚಿವ

ksrtc
Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 2 ಸಾವಿರ ಚಾಲಕ-ಕಂ-ನಿರ್ವಾಹಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.

ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ಸಾಂಕೇತಿಕವಾಗಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಿಸಿದರು.

ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಹಾಗೂ ಅಪಘಾತಗಳಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಕರೋನಾ ನಂತರ ನಿಗಮವು ಹಲವು ಅಡತಡೆಗಳನ್ನು ಎದುರಿಸಿ ಆರ್ಥಿಕವಾಗಿ ಸಭಲತೆಯ ಹಾದಿಯಲ್ಲಿ ಸಾಗಿದೆ. ಕಾರ್ಮಿಕ ಹಿತವನ್ನು ಗಮದಲ್ಲಿರಿಸಿಕೊಂಡು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿರುತ್ತದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಸಾವಿರಕ್ಕೂ ಹೆಚ್ಚು ಮೃತ ಸಿಬ್ಬಂದಿಗಳ ಅವಲಂಬಿತರಿಗೆ ನೌಕರಿ ನೀಡಿದ್ದೇವೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳಿಗೆ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರ ನೀಡಲಾಗುತ್ತಿದೆ. ಇನ್ನೂ 9 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ 7.5 ಸಾವಿರ ಹುದ್ದೆಗಳ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಚಿವರು ವಿವರಿಸಿದರು.

"ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿದ್ದು, ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ."  -ಎಸ್.ಆರ್.ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net