

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಉದ್ಘಾಟಿಸಿದರು.
ಈ ವೇಳೆ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಎಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಅವರು ಉಪಸ್ಥಿತರಿದ್ದರು.
ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಗೃಹ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾದ ಶೌಚಾಲಯ, ಆವರಣದ ನೆಲಗಟ್ಟಣೆ, ಕಾಂಕ್ರೀಟಿಕರಣ, ಬಸ್‌ಗಳ ನಿಲುಗಡೆಗೆ 4 ಅಂಕಣಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ (ಆರ್.ಓ ಪ್ಲಾಂಟ್), ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಮುಖ್ಯ ಕಟ್ಟಡದ ನೆಲಹಾಸಿಗೆ ಗ್ರಾನೈಟ್, ಉಪಹಾರ ಗೃಹ ಮತ್ತು ವಾಣಿಜ್ಯ ಮಳಿಗೆಗಳು, ಸಂಚಾರ ನಿಯಂತ್ರಣಾ ಕೊಠಡಿ, ಮೊದಲನೇ ಮಹಡಿಯಲ್ಲಿ ಕಛೇರಿ ಉಪಯೋಗಕ್ಕಾಗಿ ಕೊಠಡಿ, ವಿಶೇಷ ಚೇತನರಿಗೆ ಲಿಫ್ಟ್ ವ್ಯವಸ್ಥೆ ಸಹ ಮಾಡಲಾಗಿದೆ.