

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಶುಕ್ರವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಸ್ ಚಾಲಕರೊಬ್ಬರು ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತರು. ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕ ದತ್ತಾ ಮಂಡೋಳ್ಕರ್, ಶುಕ್ರವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಗೆ ತೆರಳಿದ್ದರು. ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಇಂದೂ ಕೂಡ ಬೆಳಗಾವಿಯಲ್ಲಿ ನೌಕರರ ಪ್ರತಿಭಟನೆ ಮುಂದುವರಿದಿದೆ.