ಸಾರಿಗೆ ನೌಕರರ ಮುಷ್ಕರ- ಹಗರಿಬೊಮ್ಮನಹಳ್ಳಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು

IMG-20201212-WA0006.jpg
Published on

ಬಳ್ಳಾರಿ: ಜಿಲ್ಲೆಯಲ್ಲಿ ಶನಿವಾರ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದೆ. ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಗರಿಬೊಮ್ಮನಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಬಸ್ ಮೇಲೆ ಕಲ್ಲು ಎಸೆದಿದ್ದು ಹಿಂಬದಿ ಗಾಜು ಪುಡಿಯಾಗಿದೆ.

ಹಗರಿಬೊಮ್ಮನಹಳ್ಳಿ ಡಿಪೋಕ್ಕೆ ಸೇರಿದ ಬಸ್ ಎಮ್ಮಿಗನೂರಿಗೆ ಹೊರಟಿತ್ತು. ತಾಲೂಕಿನ ಪಿಂಜಾರ್ ಹೆಗ್ಡಾಳ್ ಹಾಗೂ ಉಪನಾಯಕನಹಳ್ಳಿ ಮಧ್ಯೆ ಕಲ್ಲು ಎಸೆಯಲಾಗಿದೆ. ಬಸ್ ನಲ್ಲಿ ನಾಲ್ಕು ಜನ ಪ್ರಯಾಣಿಕರಿದ್ದರು. ಬಸ್ ಸಿಬ್ಬಂದಿ ದೂರು ನೀಡಲು ಹಗರಿಬೊಮ್ಮನಹಳ್ಳಿ ಠಾಣೆಗೆ ತೆರಳಿದರು. ಹೂವಿನ ಹಡಗಲಿಯಲ್ಲಿ ಜನರು ಖಾಸಗಿ ವಾಹನಗಳ ಮೂಲಕ ಪ್ರಯಾಣಿಸುತ್ತಿದ್ದಾರೆ.

ಹರಪನಹಳ್ಳಿಯಲ್ಲಿ ಬಸ್ ಗಳು ಡಿಪೋದಿಂದ ಹೊರಗೆ ಬಂದಿಲ್ಲ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜನರು ಬಸ್ ನಿಲ್ದಾಣಕ್ಕೆ ಆಗಮಿಸಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ಬಸ್ ನಿಲ್ದಾಣದಲ್ಲೇ ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net