ರಾಮನಗರಕ್ಕೆ ಜೆ.ಹೇಮಾವತಿ ವರ್ಗಾವಣೆ

trafer
Published on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 9 ವರ್ಷಗಳಿಂದ ವಾರ್ತಾ ಸಹಾಯಕಿಯಾಗಿ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದ ಜೆ.ಹೇಮಾವತಿ ಅವರು ರಾಮನಗರ ಜಿಲ್ಲೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ವರ್ಗಾವಣೆಯಾಗಿದ್ದಾರೆ.

ವಾರ್ತಾ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಸರ್ಕಾರದ ಪ್ರತಿ ಯೋಜನೆ, ಸವಲತ್ತುಗಳನ್ನು ಸುದ್ದಿಗಳ ರೂಪದಲ್ಲಿ ಪತ್ರಕರ್ತರ ಮೂಲಕ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪತ್ರಕರ್ತರು ಇಲಾಖೆಗೆ ತುಂಬಾ ಸಹಕಾರ ನೀಡಿದ್ದಾರೆ. 9 ವರ್ಷದ ಅವಧಿಯಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನನಗೆ ತುಂಬಾ ಸಹಕಾರ ನೀಡಿದ್ದಾರೆ ಎಂದು ಹೇಮಾವತಿ ಧನ್ಯವಾದ ಅರ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net