ಚಂದ್ರಗಿರಿ ಬೆಟ್ಟದಲ್ಲಿ ಎರಡು ಚಿರತೆ ಪ್ರತ್ಯಕ್ಷ

220px-African_Leopard_Near_Okevi_Waterhole_Etosha_Namibia
Published on


ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದಲ್ಲಿ ಗುರುವಾರ ಸಂಜೆ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಕಳೆದ ಒಂದುವರೆ ವರ್ಷದ ಹಿಂದೆ ಚಂದ್ರಗಿರಿ ಹಾಗೂ ವಿಂಧ್ಯಗಿರಿ ಬೆಟ್ಟದ ತಪ್ಪಲಿನಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದವು. ಬಳಿಕ ಮಹಾ ಮಸ್ತಕಾಭಿಷೇಕ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಗಳನ್ನು ಸೆರೆ ಹಿಡಿದಿದ್ದರು.
ಆದರೆ ಈಗ ಮತ್ತೊಮ್ಮೆ ಚಿರತೆಗಳು ಕಾಣಿಸಿಕೊಂಡಿರುವುದರಿಂದ ಪ್ರವಾಸಿಗರು ಹಾಗೂ ಸ್ಥಳಿಯರು ಭಯಗೊಂಡಿದ್ದಾರೆ. ಶ್ರವಣಬೆಳಗೊಳ ವ್ಯಾಪ್ತಿಯ ಸುತ್ತಮುತ್ತಲು ಬೆಟ್ಟ-ಗುಡ್ಡಗಳು ಹಾಗೂ ಕುರುಚಲು ಗಿಡಗಳ ಪ್ರದೇಶ ಇರುವುದರಿಂದ ಚಿರತೆಗಳ ವಾಸತಾಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಲಯ ಅರಣ್ಯಾಧಿಕಾರಿ ಎಚ್.ಆರ್.ಹೇಮಂತ್ ಕುಮಾರ್, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಬೋನು ಅಳವಡಿಕೆ ಹಾಗೂ ಇತರೆ ವ್ಯವಸ್ಥೆಯೊಂದಿಗೆ ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net