ಟಿಬೆಟಿಯನ್ ಕ್ಯಾಂಪ್ ಮಾರ್ಗದಲ್ಲಿ ಸಂಚಾರ ದುಸ್ತರ

MND Road
Published on

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್‌ಗೆ ತೆರಳುವ ಮಾರ್ಗದಲ್ಲಿ ಅರ್ಧ ಕಿಮಿನಷ್ಟು ರಸ್ತೆ ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಮುಂಡಗೋಡ-ಯಲ್ಲಾಪುರ ರಾಜ್ಯ ಹೆದ್ದಾರಿ ಇದಾಗಿದ್ದು, ನಾಲ್ಕು ಕಿಮೀ ಅಂತರದಲ್ಲಿರುವ ಟಿಬೆಟಿಯನ್‌ಕ್ಯಾಂಪ್‌ಗೆ ಪ್ರತಿದಿನ ನೂರಾರು ಪ್ರವಾಸಿಗರು ಈ ಮಾರ್ಗದಲ್ಲಿ ತೆರಳುತ್ತಾರೆ. ಅಲ್ಲದೆ ಮುಂಡಗೋಡ-ಯಲ್ಲಾಪುರ ಮಧ್ಯದಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೊಂಡಗಳನ್ನು ಮುಚ್ಚಿ ವಾಹನಗಳ ಸಂಚಾರಕ್ಕೆ ಅನುವು ಮಾಡಬೇಕಿದ್ದ ಲೋಕೋಪಯೋಗಿ ಇಲಾಖೆಯವರು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಮಳೆಯಾದಾಗ ಹೊಂಡಗಳಲ್ಲಿ ನೀರು ನಿಲ್ಲುತ್ತದೆ. ಈ ಕುರಿತು ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೆ ರಸ್ತೆಯಲ್ಲಿನ ಹೊಂಡಗಳನ್ನು ಮುಚ್ಚಿಸಿ ವಾಹನ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net