ತಂದೆ ತಾಯಿಯನ್ನು ಗೌರವದಿಂದ ಕಾಣಲಿ

25 lxr 2
Published on

ಲಕ್ಷ್ಮೇಶ್ವರ: ಬದುಕಿನಲ್ಲಿ ಎದುರಾಗುವ ಕಷ್ಟ ನಷ್ಟಗಳನ್ನು ಅನುಭವಿಸಿ ತಂದೆ -ತಾಯಿ ನಮ್ಮನ್ನು ಬೆಳೆಸಿರುತ್ತಾರೆ. ಅವರ ಮುಪ್ಪಿನ ಕಾಲದಲ್ಲಿ ಮಕ್ಕಳಾದವರು ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಹೇಳಿದರು.

ಇಲ್ಲಿನ ಬಾಳಿಕಾಯಿ ಅವರ ಜಿನ್ನಿಂಗ್ ಮಿಲ್​ನಲ್ಲಿ ಶುಕ್ರವಾರ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಮಾಸಿಕ ಸಭೆಯಲ್ಲಿ ಹಿರಿಯ ನಾಗರಿಕರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.

ಚಂಬಣ್ಣ ಬಾಳಿಕಾಯಿ ಮಾತನಾಡಿ, ಹಿರಿಯ ನಾಗರಿಕರ ಸಂಘ ತನ್ನ ಸದಸ್ಯರಿಗೆ ಅನುಕೂಲ ಆಗುವ ರೀತಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಇನ್ನರ್​ವ್ಹೀಲ್ ಕ್ಲಬ್ ಅಧ್ಯಕ್ಷೆ ಮಾಲಾದೇವಿ ದಂಧರಗಿ, ಸಂಘದ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ ಅಧ್ಯಕ್ಷತೆ ವಹಿಸಿದ್ದರು. ಎಸ್.ಪಿ. ಪಾಟೀಲ, ಚನ್ನಪ್ಪ ಕೋಲಕಾರ, ನೀಲಪ್ಪ ಕರ್ಜೆಕಣ್ಣವರ ಮಾತನಾಡಿದರು. ಹೇಮಗಿರಿಮಠ, ಸಿ.ಎಸ್. ಮಡಿವಾಳರ, ಎಸ್.ಸಿ. ಅಳಗವಾಡಿ, ಸಿಕಂದರ್ಸಾಬ್ ಮಂಜಲಾಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net