ಚಿಕಿತ್ಸೆಗಾಗಿ ವೃದ್ಧ ಕೈದಿ ಆಸ್ಪತ್ರೆಗೆ ದಾಖಲು

doctor
Published on

ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಟಿಬಿ ರೋಗದಿಂದ ಬಳಲುತ್ತಿದ್ದ 79 ವರ್ಷದ ವೃದ್ಧ ಕೈದಿಯನ್ನು ಮೇಲಾಧಿಕಾರಿಗಳ ಒಪ್ಪಿಗೆ ಮೇರೆಗೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಜೈಲಾಧಿಕಾರಿಗಳು ಕಳುಹಿಸಿಕೊಟ್ಟಿದ್ದಾರೆ.

ಗೋಕಾಕ ತಾಲೂಕಿನಲ್ಲಿ 2 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವೃದ್ಧ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ವಾರದ ಹಿಂದೆ ಡಿಸ್ಜಾರ್ಜ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net