ಮರ ಬಿದ್ದು ನಾಲ್ಕು ಮನೆಗಳು ಜಖಂ

10NGD2
Published on

ನಂಜನಗೂಡು: ತಾಲೂಕಿನ ಬಸವನಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಭಾರಿ ಗಾತ್ರದ ಆಲದ ಮರ ಉರುಳಿದ್ದು ನಾಲ್ಕು ಮನೆಗಳು ಜಖಂಗೊಂಡಿವೆ.


ಮರ ಉರುಳಿ ಬಿದ್ದ ರಭಸಕ್ಕೆ ವಿದ್ಯುತ್ ತಂತಿ ಸಮೇತ ಕಂಬಗಳು ನೆಲಕ್ಕುರುಳಿವೆ. ಇದರಿಂದಾಗಿ ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚನ್ನೇಗೌಡ ಅವರ ಮನೆಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮರ ತೆರವುಗೊಳಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿದ್ಯುತ್ ಕಂಬ ಉರುಳಿ ಬಿದ್ದ ಪರಿಣಾಮ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸೆಸ್ಕ್ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯದಲ್ಲಿ ತೊಡಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net