ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

treee fallen on car~3
Published on

ಯಲ್ಲಾಪುರ:ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು, ಇಬ್ಬರು ಗಾಯಗೊಂಡ ಘಟನೆ ಪಟ್ಟಣದ ಹಳಿಯಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಶುಕ್ರವಾರ ನಡೆದಿದೆ.

ಕಾರಿನಲ್ಲಿದ್ದ ಉಮ್ಮಚಗಿಯ ಸುಬ್ರಹ್ಮಣ್ಯ.ಆರ್. ಹೆಗಡೆ ಹಾಗೂ ಪರಶುರಾಮ ವಾಲೇಕರ್ ಗಾಯಗೊಂಡವರು.‌ ಇವರು ಕಾರಿನಲ್ಲಿ ಹಳಿಯಾಳ ಕಡೆಗೆ ಹೋಗುವಾಗ ಏಕಾಏಕಿ ಮರವೊಂದು ಕಾರಿನ ಮೇಲೆ ಬಿದ್ದು, ಕಾರು ನುಜ್ಜುಗುಜ್ಜಾಗಿದೆ. 

ಕಾರಿನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net