ಮಂಡ್ಯ ನಗರದಲ್ಲಿ ಬಿರುಗಾಳಿ ಸಹಿತ ಜೋರು ಮಳೆ: ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

Tree fell on the car young man died mandya
Published on

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕ ಮೃತಪಟ್ಟಿದ್ದಾನೆ.
ಮಂಡ್ಯ ತಾಲೂಕು ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. ಈ ಹಿನ್ನೆಲೆಯಲ್ಲಿ ತಂದೆಯ ಆರೋಗ್ಯ ವಿಚಾರಿಸಿಕೊಂಡು ಹಾಗೂ ಹೊಸ ಬಟ್ಟೆ ಖರೀದಿಸಲೆಂದು ನಗರಕ್ಕೆ ಆಗಮಿಸಿದ್ದನು. ಜಿಲ್ಲಾಸ್ಪತ್ರೆ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಂದೆಯ ಆರೋಗ್ಯ ವಿಚಾರಿಸಿ ಹೊರಬರುತ್ತಿದ್ದಂತೆ ಜೋರು ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದನು. ದುರಾದೃಷ್ಟವಶಾತ್ ಬೃಹತ್ ಗಾತ್ರದ ಮರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಕ್ರೇನ್ ಸಹಾಯದಿಂದ ಮರ ತೆರವು ಮಾಡಿದರು. ಘಟನೆ ಸಂಬಂಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net