ರಸ್ತೆಗುರುಳಿದ ಬೃಹತ್ ಮರ

IMG_20240719_092856
Published on

ಗಂಡಸಿ: ಹೋಬಳಿ ವ್ಯಾಪ್ತಿಯಲ್ಲಿ ಮೂರ‌್ನಾಲ್ಕು ದಿನಗಳಿಂದ ಬಿಡುವು ನೀಡದೆ ಸುರಿಯುತ್ತಿರುವ ಸೋನೆ ಮಳೆಗೆ ರಸ್ತೆಯ ಬದಿಯ ಮರಗಳು ಧರೆಗುರುಳುತ್ತಿವೆ.


ಅರಸೀಕೆರೆ- ಚನ್ನರಾಯಪಟ್ಟಣ ರಸ್ತೆಯ ದಾಸೇನಹಳ್ಳಿ ಗೇಟ್ ಬಳಿ ಶುಕ್ರವಾರ ಬೆಳಗ್ಗೆ ರಸ್ತೆಗೆ ಬೃಹತ್ ಆಲದ ಮರ ನೆಲಕ್ಕುರುಳಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದರಿಂದ ಎರಡು ಗಂಟೆಗಳ ಕಾಲ ಸಂಚಾರ ಬಂದ್ ಆಗಿದ್ದರಿಂದ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿರುಗಾಳಿ ಸಹಿತ ಮಳೆಗೆ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸೆಸ್ಕ್ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net