ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ನಿರ್ಬಂಧ

31..npk-2
ಮಡಿಕೇರಿ ಪ್ರಾದೇಶಿಕ ವಿಭಾಗ ವ್ಯಾಪ್ತಿಯ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯ ತಡಿಯಂಡಮೋಳ್ ಬೆಟ್ಟದ ಸುಂದರ ನೋಟ.
Published on

ನಾಪೋಕ್ಲು: ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯ ತಡಿಯಂಡಮೋಳ್ ಬೆಟ್ಟಕ್ಕೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಚಾರಣ ನಿರ್ಬಂಧಿಸಲಾಗಿದೆ.

ಕೆಲ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಜನ-ಜಾನುವಾರುಗಳ ಪ್ರಾಣಹಾನಿ, ಮೂಲಸೌಕರ್ಯ ಹಾನಿಯಾಗುವಂತಹ ಪ್ರಕರಣಗಳು ವರದಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆಗಾಲ ಪ್ರಾರಂಭವಾಗಿದ್ದು, ಬಿರುಸಿನ ಮಳೆಯಾಗುತ್ತಿರುವುದರಿಂದ ಮಳೆ-ಗಾಳಿಯಿಂದಾಗಿ ಅಪಾಯಕಾರಿ ಹಂತದಲ್ಲಿರುವ ಮರದ ರೆಂಬೆ-ಕೊಂಬೆಗಳು ರಸ್ತೆ ಮೇಲೆ ಅಥವಾ ಸಂಚರಿಸುವ ಮಾರ್ಗದಲ್ಲಿ ಮುರಿದು ಬಿದ್ದು ಪ್ರಾಣಾಪಾಯವಾಗುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮುಂಗಾರು ಅವಧಿ ಮುಕ್ತಾಯಗೊಳ್ಳುವವರೆಗೆ ಅರಣ್ಯ ವ್ಯಾಪ್ತಿಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ.

ಮಡಿಕೇರಿ ಪ್ರಾದೇಶಿಕ ವಿಭಾಗ ವ್ಯಾಪ್ತಿಯ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯಲ್ಲಿ ತಡಿಯಂಡಮೋಳ ಬೆಟ್ಟದಲ್ಲಿ ಚಾರಣ ತೆರಳಲು ಇಲಾಖೆ ಅನುಮತಿ ಪಡೆಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಪ್ರಸ್ತುತ ಬೆಟ್ಟದ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು, ಮೋಡ ಮತ್ತು ಮಂಜು ಕವಿದುಕೊಂಡಿರುವ ಕಾರಣ ರಸ್ತೆಗಳು ಸರಿಯಾಗಿ ಕಾಣದೆ ಪ್ರವಾಸಿಗರು ದಿಕ್ಕು ತಪ್ಪು ಸಾಧ್ಯತೆ ಇದೆ. ಅದಲ್ಲವೆ ಕಾಡು ಪ್ರಾಣಿಗಳ ಓಡಾಟ ಕೂಡ ಇರುವುದರಿಂದ ಮಳೆಗಾಲ ಮುಗಿಯುವಲ್ಲಿ ವರೆಗೆ ಚಾಣಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net