ಕೊಯಮತ್ತೂರು-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ!

Vande Bharath
Published on

ಬೆಂಗಳೂರು: ಬಹುನಿರೀಕ್ಷಿತ ಕೊಯಮತ್ತೂರು-ಬೆಂಗಳೂರು ನಡುವೆ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಮಂಗಳವಾರ ಪ್ರಾಯೋಗಿಕ ಸಂಚಾರ ನಡೆಸಿತು.

ತಮಿಳುನಾಡಿನ ಕೊಯಮತ್ತೂರಿನಿಂದ ಬೆಳಗ್ಗೆ 5 ಗಂಟೆಗೆ ಹೊರಟ ರೈಲು, ಬೆಳಗ್ಗೆ 10.38ರ ಹೊತ್ತಿಗೆ ಬೆಂಗಳೂರು ಕಂಟೋನ್ಮೆಂಟ್​ ತಲುಪಿತು. ಪರಿಶೀಲನಾ ಸಂಚಾರದ ವೇಳೆ ಮಾರ್ಗದ ಸುರಕ್ಷತೆ, ಕೊನೆಯ ನಿಲ್ದಾಣವನ್ನು ತಲುಪಲು ತೆಗೆದುಕೊಳ್ಳುವ ಸಮಯ ಇತ್ಯಾದಿಗಳನ್ನು ಪರೀಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ಬೆಂಗಳೂರು ಕಂಟೋನ್ಮೆಂಟ್​ಗೆ ರೈಲು ತಲುಪುತ್ತಿದ್ದಂತೆ, ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಯೋಗೇಶ್​ ಮೋಹನ್​ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಡಿ.30ಕ್ಕೆ ಚಾಲನೆ?

ಕೊಯಮತ್ತೂರು-ಬೆಂಗಳೂರು ನಡುವೆ ಸಂಚರಿಸಲಿರುವ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಡಿ.30ರಂದು ಪ್ರಧಾನಿ ವರ್ಚುವಲ್​ ಕಾರ್ಯಕ್ರಮ ನಡೆಸಿ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯ ಬೆಂಗಳೂರು-ಧಾರವಾಡ ಮತ್ತು ಚೆನ್ನೈ-ಮೈಸೂರು ನಡುವೆ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲುಗಳು ಸಂಚರಿಸುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net