ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತ್ರಿಕೋನ ಸ್ಪರ್ಧೆ? ; ಬಹುನಿರೀಕ್ಷಿತ ಗ್ರಾಪಂ ಚುನಾವಣೆಗೆ ಸಿದ್ಧತೆ ; ಹಳ್ಳಿಗಳಲ್ಲಿ ಗರಿಗೆದರಿದ ರಾಜಕೀಯ

Screenshot_20201204_202106
Published on

ಚಿಕ್ಕನಾಯಕನಹಳ್ಳಿ: ಗ್ರಾಪಂ ಚುನಾವಣೆಗೆ ದಿನಾಂಕ ೋಷಣೆಯಾದ ನಂತರ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಹುಳಿಯಾರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ತಾಲೂಕಿನ 28 ಗ್ರಾಪಂ ಸದಸ್ಯ ಸ್ಥಾನಕ್ಕೆ ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು, ತಾಲೂಕಿನಲ್ಲಿ ಪ್ರಬಲವಾಗಿರುವ ಮೂರು ರಾಜಕೀಯ ಪಕ್ಷಗಳು ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಆರಂಭಿಸಿವೆ.

ಗ್ರಾಮೀಣ ಭಾಗದಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಜೆಡಿಎಸ್ ಮಾಜಿ ಶಾಸಕ ಸಿ.ಬಿ.ಸುರೇಶ್‌ಬಾಬು ನೇತೃತ್ವದಲ್ಲಿ ಚುನಾವಣೆಗೆ ಅಣಿಯಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಟಿ.ಜೆ.ಸಂತೋಷ್ ಲಿತಾಂಶದ ನಂತರ ಕ್ಷೇತ್ರಕ್ಕೆ ಬಾರದಿರುವುದು ಕಾಂಗ್ರೆಸ್ ಕಾರ್ಯಕರ್ತರ ಚಿಂತೆ ಹೆಚ್ಚಿಸಿದೆ.

ಸಂತೋಷ್ ಕ್ಷೇತ್ರದಿಂದ ದೂರವಾಗುವುದು ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಾ.ಸಾಸಲು ಸತೀಶ್ ಗುರುವಾರ ಗೃಹ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಗ್ರಾಪಂ ಚುನಾವಣೆಗೆ ಸಿದ್ಧರಾಗುವಂತೆ ಸೂಚಿಸಿರುವುದು ತಾಲೂಕಿನಲ್ಲಿ ತ್ರಿಕೋನ ಸ್ಪರ್ಧೆ ಖಚಿತಪಡಿಸಿದೆ.

ಸಚಿವ ಜೆ.ಸಿ.ವಾಧುಸ್ವಾಮಿ ಕೂಡ ತಮ್ಮ ಪರ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಅಭಿವೃದ್ಧಿ ಕೆಲಸಗಳನ್ನು ತೋರಿಸಲು ಮುಂದಾಗಿದ್ದರೆ, ವಾಜಿ ಶಾಸಕ ಕೆ.ಎಸ್.ಕಿರಣ್‌ಕುವಾರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ತೋರಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ನಿಲ್ಲಲಿದ್ದು ಬಿಜೆಪಿಯಲ್ಲಿಯೇ ಎರಡು ಬಣ ಸೃಷ್ಟಿಯಾಗಿವೆ. ಕಳೆದ ಬಾರಿ 28 ಗ್ರಾಪಂಗಳಲ್ಲಿ 12ರಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಹಿಡಿದಿದ್ದರು, 14 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ನಡೆಸಿದ್ದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಗ್ರಾಪಂ ಚುಕ್ಕಾಣಿ ಹಿಡಿದಿದ್ದರು. ತಾಲೂಕಿನ ಒಟ್ಟು 28 ಗ್ರಾಪಂನಿಂದ 448 ಸದಸ್ಯರು ಆಯ್ಕೆಯಾಗಬೇಕಾಗಿದೆ.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದೆಲ್ಲೆಡೆ ಸಂಚರಿಸಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಪಕ್ಷದ ಸಂಟನೆ ಸಾಮರ್ಥ್ಯ, ನಿಷ್ಠೆ ಹಾಗೂ ಜನಪರ ಕಾಳಜಿ ಇರುವವರನ್ನು ಗುರುತಿಸಿ ಬೆಂಬಲ ನೀಡಲಾಗುವುದು. ನಮ್ಮ ಕ್ಷೇತ್ರದ 34ರಲ್ಲಿ ಕನಿಷ್ಠ 30ರಲ್ಲಿ ಜೆಡಿಎಸ್ ಗೆಲ್ಲಲಿದೆ. ಸಿ.ಬಿ.ಸುರೇಶ್‌ಬಾಬು, ಜೆಡಿಎಸ್ ಮುಖಂಡ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಬೆಂಬಲ ನೀಡಲಾಗುತ್ತಿದೆ, ಮೀಸಲಾತಿ ಇರುವಂತಹ ವರ್ಗದವರಿಗೆ ಅಧಿಕಾರ ಸಿಗಲಿ ಎಂಬ ಆಶಯದಿಂದಲೇ ಕಾಂಗ್ರೆಸ್ ಗ್ರಾಪಂ ಚುನಾವಣೆ ಎದುರಿಸುತ್ತಿದೆ, ತಾಲೂಕಿನ ಜನರು ಬದಲಾವಣೆ ಬಯಸಿದ್ದು ಅದು ಗ್ರಾಮಗಳಿಂದಲೇ ಆರಂಭವಾಗಲಿದೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಡಾ.ಸಾಸಲು ಸತೀಶ್ ಕಾರ್ಯಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ನಿಷ್ಠಾವಂತ ಕಾರ್ಯಕರ್ತರು ಹಾಗೂ ಸ್ಥಳೀಯ ಜನರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರುವವರಿಗೆ ಬೆಂಬಲ ನೀಡಲಾಗುವುದು. 5 ತಾಲೂಕಿನ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪನವರೇ ಉತ್ಸಾಹ ತುಂಬಿದ್ದಾರೆ, ಕನಿಷ್ಠ 22 ಗ್ರಾಪಂನಲ್ಲಿ ಬಿಜೆಪಿ ಗೆಲ್ಲಲಿದೆ. ಎಂ.ಎಂ.ಜಗದೀಶ್ ಬಿಜೆಪಿ ಮಂಡಲ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net