

ರಾಯಚೂರು ತಾಲೂಕಿನ ಯರಗೇರಾ ಹಾಗೂ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ಜೂ.23 ರಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ನಾನಾ ಕಾರ್ಯಕ್ರಮಗಳ ಸಿದ್ಧತೆಯನ್ನು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಶುಕ್ರವಾರ ಕಾರ್ಯಕ್ರಮದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಹಿನ್ನೆಲೆಯಲ್ಲಿ ಹಬ್ಬದ ರೀತಿಯಲ್ಲಿ ಸಿದ್ಧವಾಗುತ್ತಿರುವ ವಿಶ್ವ ವಿದ್ಯಾಲಯದ ಆವರಣದಲ್ಲಿನ ನಾನಾ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ನಂತರ ಯರಗೇರಾ ಕ್ರಾಸ್ ಬಳಿಯಲ್ಲಿ, ಬೃಹತ್ ರೀತಿಯಲ್ಲಿ ಸಿದ್ಧವಾಗುತ್ತಿರುವ ಬುಡಕಟ್ಟು ಉತ್ಸವ ಹಾಗೂ 371 ಜೆ ದಶಮಾನೋತ್ಸವ ಮತ್ತು ರಾಯಚೂರ ಗ್ರಾಮೀಣ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದ ಮುಖ್ಯ ವೇದಿಕೆಯ ಸಿದ್ಧತೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎ.ವಸಂತಕುಮಾರ, ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ ಇಟಗಿ, ರಜಾಕ ಉಸ್ತಾದ್, ಮಲ್ಲಿಕಾರ್ಜುನ ಗೌಡ ತಲಮಾರಿ, ಅಸ್ಲಂ ಪಾಶಾ ಸೇರಿದಂತೆ ಅನೇಕರು ಇದ್ದರು.