

ಬೇಲೂರು: ತಾಲೂಕಿನ ಆಂದಲೆ ಗೊರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಗ್ರಾಮಸ್ಥರು ಹಾಗೂ ಎಸ್‌ಡಿಎಂಸಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿಗೆ ಶ್ರಮಿಸಿದ ಗೊರೂರು ಗ್ರಾಮದ ನಿವೃತ್ತ ಯೋಧ ವೀರಭದ್ರ, ಶಿಕ್ಷಕರಾದ ಈರೇಶ್, ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ವಿ.ಎಲ್.ಲಕ್ಷ್ಮಣ್, ಸಹ ಶಿಕ್ಷಕ ಧರ್ಮಪ್ಪ, ಎಸ್‌ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರಿದ್ದರು.