ನಿವೃತ್ತ ಯೋಧ ನಾರಾಯಣಗೆ ಸನ್ಮಾನ

athmashakthi
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಿವೃತ್ತ ಯೋಧ ನಾರಾಯಣ ಎ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ಸೀತಾರಾಮ್ ಎನ್, ಸಿಇಒ ಸೌಮ್ಯ ವಿಜಯ್ ಮತ್ತಿತರರು ಹಾಜರಿದ್ದರು.
Published on

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ನಿವೃತ್ತ ಯೋಧ ನಾರಾಯಣ ಎ. ಮಂಗಳವಾರ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿದರು.

ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಎ. ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ್ ಮರೋಳಿ, ಮುದ್ದು ಮೂಡುಬೆಳ್ಳೆ, ದಿವಾಕರ್ ಬಿ.ಪಿ., ಗೋಪಾಲ್ ಎಂ., ಚಂದ್ರಾವತಿ, ಉಮಾವತಿ ,ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಾಮನ್ ಕೆ ಮತ್ತಿತರರು ಉಪಸ್ಥಿತರಿದ್ದರು. ಸಿಇಒ ಸೌಮ್ಯ ವಿಜಯ್ ಸ್ವಾಗತಿಸಿ, ಸಹಾಯಕ ಪ್ರಬಂಧಕ ವಿಶ್ವನಾಥ ವಂದಿಸಿದರು. ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net