ಕಾರ್ಮಿಕರನ್ನು ಒಟ್ಟುಗೂಡಿಸಿದವರು ರಮೇಶ

TRIBUTE SUBMISSION KOPPAL BUILDING LABOR ASSOSIATION
ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಮೇಶ ಚಿಕೇನಕೊಪ್ಪ ನಿಧನ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಸೋಮವಾರ ಶ್ರದ್ಧಾಂಲಿ ಸಲ್ಲಿಸಲಾಯಿತು. ಪ್ರಮುಖರಾದ ಬಸವರಾಜ ಶೀಲವಂತರ, ಡಾ.ಕೆ.ಎಸ್.ಜನಾರ್ದನ, ಎಸ್.ಎ.ಗಫಾರ್,ನೂರ್ ಸಾಬ್ ಇತರರಿದ್ದರು.
Published on

ಕೊಪ್ಪಳ: ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆ ಹುಟ್ಟು ಹಾಕುವಾಗ ಎದುರಾದ ಸಮಸ್ಯೆಗಳು ಅಷ್ಟಿಷ್ಟಲ್ಲ. ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಕಟ್ಟಡ ಕಾರ್ಮಿಕರನ್ನು ಸಂಘಟಿಸುವಲ್ಲಿ ಯಶಸ್ವಿಯಾದವರು ಕಾಮ್ರೇಡ್ ರಮೇಶ ಚಿಕೇನಕೊಪ್ಪ ಎಂದು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ ಹೇಳಿದರು.

ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಮೇಶ ಚಿಕೇನಕೊಪ್ಪ ನಿಧನ ಹಿನ್ನೆಲೆಯಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಬಡವರು, ದಲಿತರು, ಮಹಿಳೆಯರು ಹಾಗೂ ಕಾರ್ಮಿಕರ ಪರ ಹೋರಾಡಿದವರು. ಯಾವದೇ ಫಲಾಪೇಕ್ಷೆ ಇಲ್ಲದೇ ನಿರಂತರ ಹೋರಾಟ ರೂಪಿಸಿದರು. ರಮೇಶ ಅಗಲಿಕೆ ಕಾರ್ಮಿಕ ಚಳವಳಿಗಳಿಗೆ ಹಿನ್ನಡೆ ತಂದಂತಾಗಿದೆ ಎಂದರು.

ಸಂಘದ ರಾಜ್ಯ ಸಂಘನ ಕಾರ್ಯದರ್ಶಿ ಡಾ.ಕೆ.ಎಸ್.ಜನಾರ್ದನ ಮಾತನಾಡಿ, ಸಂಘಟನೆಗಾಗಿ ರಮೇಶ ಹಗಲು-ರಾತ್ರಿ ಶ್ರಮಿಸಿದ್ದಾರೆ. ಅವರ ನೆನಪಿನಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಣೆ ಮಾಡುವಂತೆ ಸಲಹೆ ನೀಡಿದರು.

ಸಂಘದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್, ತಾಲೂಕಾ ಸಂಚಾಲಕ ನೂರ್ ಸಾಬ್ ಹೊಸಮನಿ, ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ಗಾಳೆಪ್ಪ ಮುಂಗೋಲಿ, ಈರಪ್ಪ ಚಾಕ್ರಿ, ಶಂಶುದ್ದೀನ್ ಮಕಾಂದಾರ, ನಿಂಗಜ್ಜ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net